ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ 7 ಮಂದಿಯ ಭಯಾನಕ ಕೊಲೆ ಪ್ರಕರಣ ಸಂಬಂಧ ಆಘಾತಕಾರಿ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿವೆ. ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದ ಆರೋಪದ ಮೇಲೆ ಬಂಧಿತನಾಗಿರುವ ಇಂದುಶೇಖರ್, 15-20 ದಿನಗಳಿಂದ ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಕೃತ್ಯ ಎಸಗಿದ್ದಾನೆ ಎಂಬುದು ಗೊತ್ತಾಗಿದೆ. ಅಲ್ಲದೆ, ಸಾಕ್ಷ್ಯ ನಾಶಕ್ಕೆ ಯತ್ನಿಸಿರುವ ವಿಚಾರವೂ ಬಯಲಾಗಿದೆ. ಬೆಂಗಳೂರು, ನವೆಂಬರ್ 6: ಪತ್ನಿ ಹಾಗೂ ಆಕೆಯ ತವರು ಮನೆಯ ಆರು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದ ಆರೋಪದ ಮೇಲೆ ಕ್ಯಾಬ್ ಚಾಲಕ ಇಂದುಶೇಖರ್ನನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.