ಹಾಸನಾಂಬೆ ದರ್ಶನ ಆರಂಭವಾಗಿ ಇಂದಿಗೆ ಎಂಟನೇ ದಿನ. ಹಾಸನದಲ್ಲಿ ಭಕ್ತರು ಕಿಕ್ಕಿರಿದು ಸೇರಿದ್ದು, ದೇವಿಯ ದರ್ಶನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಶಿವರಾಜ್ ಎಸ್. ತಂಗಡಗಿ, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ಇಂದು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಹಾಸನ, ನವೆಂಬರ್ 06: ಹಾಸನದ ಐತಿಹಾಸಿಕ ಹಾಸನಾಂಬೆ ದೇವಸ್ಥಾನದಲ್ಲಿ ದರ್ಶನ ಆರಂಭವಾಗಿ ಇಂದಿಗೆ ಎಂಟನೇ ದಿನವಾಗಿದ್ದು, ಭಕ್ತರ ದಂಡು ನಿರಂತರವಾಗಿ ಹರಿದು ಬರುತ್ತಿದೆ. ಪ್ರತಿದಿನದಂತೆ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಸನಾಂಬೆ ದೇವಿಯ ದರ್ಶನ ಪಡೆಯಲು ಕಿಕ್ಕಿರಿದು ಆಗಮಿಸಿದ್ದಾರೆ.