ಬೆಂಗಳೂರಿನಲ್ಲಿ ನಕಲಿ ವೈದ್ಯರು ತೂಕ ಇಳಿಸುವ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡಿ, ಇಂಜೆಕ್ಷನ್ ಚಿಕಿತ್ಸೆ ಮೂಲಕ ಹಣ ಪೀಕುತ್ತಿದ್ದಾರೆ. ಅರ್ಹತೆ ಇಲ್ಲದವರು ವೈದ್ಯರ ಸೋಗಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದು, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು, ನವೆಂಬರ್ 06: ಸ್ಲಿಮ್ ಆಗಬೇಕು, ಫಿಟ್ ಆಗಿ ಕಾಣಬೇಕು, ಕಡಿಮೆ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕು ಎಂಬ ಆಸೆ ನಿಮಗಿದೆಯಾ? ಏಕೆಂದರೆ ರಾಜಧಾನಿ ಬೆಂಗಳೂರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುವ ನಕಲಿ ವೈದ್ಯರ ಜಾಲ ಸಕ್ರಿಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಣ್ಣಬಣ್ಣದ ವಿಡಿಯೋ ಹಾಕಿ, ಸ್ಟಾರ್ ಹೋಟೆಲ್ಗಳಲ್ಲೇ ಇಂಜೆಕ್ಷನ್ ಚಿಕಿತ್ಸೆ ನೀಡುವ ಆಮಿಷವೊಡ್ಡುತ್ತಿದ್ದಾರೆ.