ಭಾರತವು ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 2-0 ಮುನ್ನಡೆ ಸಾಧಿಸುವ ಗುರಿ ಹೊಂದಿದೆ. ಆದರೆ ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ, ಪಂದ್ಯದ ಆರಂಭದಲ್ಲೇ ಮಳೆ ಸುರಿಯುವ ಸಂಭವವಿದ್ದು, ಓವರ್ಗಳ ಕಡಿತವಾಗಬಹುದು. ಅಭಿಮಾನಿಗಳಿಗೆ ಪೂರ್ಣ ಪಂದ್ಯ ವೀಕ್ಷಿಸಲು ಸಾಧ್ಯವಾಗುತ್ತದೆಯೇ ಎಂಬ ಕುತೂಹಲ ಮೂಡಿದೆ. ಆಕ್ಲೆಂಡ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಟೀಂ ಇಂಡಿಯಾ, ಇದೀಗ ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ಗುರಿ ಹೊಂದಿದೆ. ಈ ಗುರಿ ತಲುಪಬೇಕಾದರೆ ವೆಲ್ಲಿಂಗ್ಟನ್ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕು.