ಮೈಸೂರು: ಆಧಾರ್ ಸೇವೆಗಳಿಗಾಗಿ ಜನರು ಪರದಾಡುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪ್ರಜ್ಞಾವಂತ ನಾಗರಿಕ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.ಆಧಾರ್ ಹೊಸ ನೋಂದಣಿ. ಆದರೆ, ಈಗ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಜನರು ದೀರ್ಘಕಾಲ ಸರದಿಯಲ್ಲಿ ಕಾಯಬೇಕಾಗಿದೆ. ವಿಶೇಷವಾಗಿ ವೃದ್ಧರು, ಅಂಗವಿಕಲರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಮಸ್ಯೆ ಕುರಿತು ಗಮನ ಸೆಳೆಯಲಾಯಿತು.ಜನರ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಸಿಬ್ಬಂದಿ ನೇಮಿಸಿ, ವಿಶೇಷ ಆಧಾರ್ ಸೇವಾ ಘಟಕಗಳನ್ನು ಆರಂಭಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.