ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಳೆದ ಎರಡು ಕಾಲು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಕೆ.ಲಕ್ಷ್ಮೀಪ್ರಿಯಾ ಅವರು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಬೋಯರ್ ಹರ್ಷಲ. ನೂತನ ಜಿಲ್ಲಾಧಿಕಾರಿಯಾಗಿ ಬೋಯರ್ ಹರ್ಷಲ್ ನಾರಾಯಣ ರಾವ್ ನೇಮಕಗೊಂಡಿದ್ದಾರೆ. 2024 ರ ಆಗಸ್ಟ್ನಲ್ಲಿ ಕೆ.ಲಕ್ಷ್ಮೀಪ್ರಿಯಾ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಶಿರೂರು ಗುಡ್ಡ ಕುಸಿತ, ಕಾಳಿ ಸೇತುವೆ ಕುಸಿತ, ಕಬ್ಬು ಬೆಳೆಗಾರರ ಪ್ರತಿಭಟನೆ ಹೀಗೆ ಹಲವು ಸವಾಲುಗಳನ್ನು ಎದುರಿಸಿದ್ದರು. ಈಗ ಅವರನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ವಿಶೇಷ ಆಯುಕ್ತರಾಗಿ ನೇಮಿಸಲಾಗಿದೆ.