ನವದೆಹಲಿ: ದಕ್ಷಿಣ ದೆಹಲಿಯ ಕಿಯಾ ಕಾರು ಶೋ ರೂಂವೊಂದರಲ್ಲಿ ಶುಕ್ರವಾರ(ನ. 06) ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಹಲವು ಕಾರುಗಳು ಬೆಂಕಿಗಾಹುತಿಯಾಗಿವೆ ಎಂದು. ಕಟ್ಟಡದಿಂದ ಮೊದಲಿಗೆ ಭಾರಿ ಮಟ್ಟದಲ್ಲಿ ಹೊಗೆ ಆವರಿಸಿದ್ದು, ಬಳಿಕ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ..ಎಸ್ಐಆರ್ ಕುರಿತು ಸುಳ್ಳು ಸುದ್ದಿ ಹರಡುತ್ತಿದ್ದಾರೆ; ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ | Amit Shah. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.