ಭಾರತ 'ಎ' ಮತ್ತು ನ್ಯೂಝೀಲೆಂಡ್ 'ಎ' ತಂಡಗಳ ನಡುವಣ ಮೊದಲ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಇದೀಗ ಉಭಯ ತಂಡಗಳ ನಡುವೆ ಮೂರನೇ ಪಂದ್ಯ ಆರಂಭವಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಇಂಡಿಯಾ 'ಎ' ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ. ನ್ಯೂಝಿಲೆಂಡ್ ಎ ವಿರುದ್ಧದ 3ನೇ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಲಿಂಕನ್ನ ಬರ್ಟ್ ಸಟ್ಕ್ಲಿಫ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಎ ತಂಡದ ನಾಯಕ ಮ್ಯಾಕ್ಸ್ ಚು ಬೌಲಿಂಗ್ ಆಯ್ದುಕೊಂಡಿದ್ದರು.