ದೇಶದ ನ್ಯಾಯಾಲಯಗಳಲ್ಲಿ ವಿಚಾರಣೆಗಾಗಿ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳನ್ನು ರಾಜಿ ಸಂಧಾನ ಅಥವಾ ಲೋಕ ಅದಾಲತ್ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಲು ಐಐಐಟಿ ಬೆಂಗಳೂರು ವಿದ್ಯಾರ್ಥಿಗಳು. ಬೆಂಗಳೂರು, ನವೆಂಬರ್ 07: ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಾಗಿ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಐಐಐಟಿ ಬೆಂಗಳೂರು ವಿದ್ಯಾರ್ಥಿಗಳು ವಿನೂತನ ಕೃತಕ ಬುದ್ಧಿಮತ್ತೆ (ಎಐ) ಸಾಧನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ನ್ಯಾಯಾಲಯದಲ್ಲಿ ವರ್ಷಗಟ್ಟಲೆ ಕಾಲಹರಣವಾಗುವ ಬದಲು, ಮಾತುಕತೆ ಅಥವಾ ಲೋಕ ಅದಾಲತ್ ಮೂಲಕ ಸುಲಭವಾಗಿ ಬಗೆಹರಿಸಿಕೊಳ್ಳಲು ಸಾಧ್ಯವಿರುವ ಪ್ರಕರಣಗಳನ್ನು ಈ 'ನ್ಯಾಯ ಸೇತು'ಎಐ ಟೂಲ್ ಗುರುತಿಸಿ ಶಿಫಾರಸು ಮಾಡುತ್ತದೆ.