ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು. ಇದೀಗ ಈ ಸರಣಿಯ ಎರಡನೇ ಪಂದ್ಯ ಶುರುವಾಗಿದ್ದು, ಈ ಮ್ಯಾಚ್ ನಲ್ಲೂ ಗೆಲ್ಲುವ ಮೂಲಕ ಸರಣಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳಲು ಟೀಮ್ ಇಂಡಿಯಾ ಯೋಜನೆ ಹಾಕಿಕೊಂಡಿದ್ದರೆ, ಅತ್ತ ನ್ಯೂಝಿಲೆಂಡ್ ತಂಡ ಈ ಮ್ಯಾಚ್ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ. ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಶುರುವಾಗಿದೆ. ವೆಲ್ಲಿಂಗ್ಟನ್ ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್ ನಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.