ತುಮಕೂರು: ಬಸ್ ಪ್ರಯಾಣ ದರ ಏರಿಕೆ ಕುರಿತು ಸಾರಿಗೆ ಸಚಿವರು ಈಗಾಗಲೇ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಯಾವ ಕಾರಣಕ್ಕಾಗಿ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ ಎಂಬುದನ್ನು ಅವರು ಸ್ಪಷ. ಈ ವಿಚಾರದಲ್ಲಿ ಆಶ್ಚರ್ಯಕರ ಸಂಗತಿಯೆಂದರೆ, ನಮ್ಮ ರಾಜ್ಯದ ಕೆಲವು ಕೇಂದ್ರ ಸಚಿವರು ರಾಜ್ಯ ಸರ್ಕಾರ ಎರಡು ಅಥವಾ ಮೂರು ಬಾರಿ ಬಸ್ ಪ್ರಯಾಣ ದರ ಹೆಚ್ಚಿಸಿದೆ ಎಂದು ಟೀಕಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 14 ಬಾರಿ ಹೆಚ್ಚಿಸಿದಾಗ ಇವರು ಏಕೆ ಮಾತನಾಡಲಿಲ್ಲ? ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತೀಕ್ಷ್ಣವಾಗಿ ಪ್ರಶ್ನಿಸಿದರು.