ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಆಂಧ್ರದಲ್ಲಿ 2 ಸ್ಟಾಪ್. ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಸಂಚಾರ ಆರಂಭಿಸಲಿರುವ ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲಿಗೆ ಆಂಧ್ರಪ್ರದೇಶದ ಎರಡು ನಿಲ್ದಾಣಗಳಲ್ಲಿ ನಿಲುಗಡೆ ನೀಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದರಿಂದ ರಾಯಲಸೀಮೆ ಭಾಗದ ಪ್ರಯಾಣಿಕರಿಗೆ ಬೆಂಗಳೂರು, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ವೇಗದ ಹಾಗೂ ಆರಾಮದಾಯಕ ರೈಲು ಸಂಪರ್ಕ ದೊರೆಯಲಿದೆ. ಬೆಂಗಳೂರು ಕೆಎಸ್ಆರ್ ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ.