Special Train: ದಸರಾ, ದೀಪಾವಳಿಯಲ್ಲಿ ತೀರ್ಥಯಾತ್ರೆಗೆ ಹೋಗುವವರಿಗೆ ಗುಡ್ನ್ಯೂಸ್: ಮೈಸೂರಿನಿಂದ ರಾಮೇಶ್ವರಕ್ಕೆ ವಿಶೇಷ ರೈಲು. ಮುಂಬರುವ ಹಬ್ಬದ ಸೀಸನ್ನಲ್ಲಿ ಊರಿಗೆ ಅಥವಾ ತೀರ್ಥಯಾತ್ರೆಗೆ ಹೋಗಬೇಕೆಂದು ಯೋಚಿಸುತ್ತಿರುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನ ನಿಯಂತ್ರಿಸುವ ಉದ್ದೇಶದಿಂದ ಮೈಸೂರು ರಾಮೇಶ್ವರಂ ವಿಶೇಷ ರೈಲು ಸಂಚಾರವನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲು ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ ಹಾಗೂ ದಂಡು ರೈಲು.