ಲಿಂಕ್ಲನ್: ಎಡಗೈ ಆರಂಭಿಕ ಯಶಸ್ವಿ ಜೈಸ್ವಾಲ್ (102 ರನ್, 138 ಎಸೆತ, 16 ಬೌಂಡರಿ, 2 ಸಿಕ್ಸರ್) ಸತತ ಎರಡನೇ ಶತಕದ ನೆರವಿನಿಂದ ಭಾರತ ಎ ತಂಡ, ಆತಿಥೇಯ ನ್ಯೂಜಿಲೆಂಡ್ ಎ ವಿರುದ್ಧ ಮೂರನೇ ಹಾಗ. ಮೂರು ಪಂದ್ಯಗಳ ಸರಣಿಯ ಆರಂಭಿಕ ಎರಡು ಪಂದ್ಯಗಳು ಡ್ರಾನಲ್ಲಿ ಮುಕ್ತಾಯಗೊಂಡಿವೆ. ಶನಿವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತ ಭಾರತ ಎ ಮೊದಲು ಬ್ಯಾಟಿಂಗ್ಗೆ ಇಳಿಯಿತು. ಯಶಸ್ವಿ ಜೈಸ್ವಾಲ್ ಹಾಗೂ ಸಾಯಿ ಸುದರ್ಶನ್ (77* ರನ್, 205 ಎಸೆತ, 10 ಬೌಂಡರಿ) ಜೋಡಿ ಹಾಕಿಕೊಟ್ಟ ಭದ್ರ ಅಡಿಪಾಯದ ನೆರವಿನಿಂದ ಭಾರತ ಎ ದಿನದಂತ್ಯಕ್ಕೆ 69.3 ಓವರ್ಗಳಲ್ಲಿ 2 ವಿಕೆಟ್ಗೆ 227 ರನ್ಗಳಿಸಿದೆ.