ಮೈಸೂರು: ಸ್ವಚ್ಛತೆ ಮತ್ತು ನೈರ್ಮಲ್ಯ ನಿರ್ವಹಣೆಯಲ್ಲಿ ದೇಶದ ಗಮನ ಸೆಳೆದಿರುವ ಸಾಂಸ್ಕೃತಿಕ ನಗರಿ ಮೈಸೂರು, ಸ್ವಚ್ಛ ಸರ್ವೇಕ್ಷಣ್ನಲ್ಲಿ ತನ್ನ ಸಾಧನೆಯನ್ನು ಮುಂದುವರಿಸಿದೆ. ಕೇಂದ್ರ ಸರ್ಕಾರದ ಸ್. ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿಗೆ ಈ ಬಾರಿಯೂ ಮೈಸೂರು ಆಯ್ಕೆಯಾಗಿದ್ದು, ನಗರ ಪಾಲಿಕೆಗೆ ಪ್ರಶಸ್ತಿ ಸ್ವೀಕರಿಸಲು ಅಧಿಕೃತ ಆಹ್ವಾನ ಬಂದಿದೆ. ಆದರೆ, ಈ ಬಾರಿ ಮೈಸೂರು ಯಾವ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ ಹಾಗೂ ರಾಷ್ಟ್ರಮಟ್ಟದಲ್ಲಿ ಯಾವ ಸ್ಥಾನ ಗಳಿಸಿದೆ ಎಂಬ ಕುತೂಹಲ ನಗರವಾಸಿಗಳಲ್ಲಿ ಮೂಡಿದೆ.ನವದೆಹಲಿಯ ವಿಜ್ಞಾನ ಭವನದಲ್ಲಿ ನ.11ರಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.