ಭಾರತ 'ಎ' ಮತ್ತು ನ್ಯೂಝೀಲೆಂಡ್ 'ಎ' ತಂಡಗಳ ನಡುವಣ ಮೊದಲ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿದ್ದವು. ಇದೀಗ ಉಭಯ ತಂಡಗಳ ನಡುವೆ ಮೂರನೇ ಪಂದ್ಯ ಆರಂಭವಾಗಿದ್ದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾ 'ಎ' ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕದೊಂದಿಗೆ ಬೃಹತ್ ಮೊತ್ತ ಪೇರಿಸಿದೆ. ಲಿಂಕನ್ನ ಬರ್ಟ್ ಸಟ್ಕ್ಲಿಫ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ಎ ವಿರುದ್ಧದ 3ನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡವು ಅದ್ಭುತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ತನ್ನ ಮೊದಲ ಇನ್ನಿಂಗ್ಸ್ ಅನ್ನು ಬೃಹತ್ ಮೊತ್ತಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.