ಹಾಸನ ಡಿಸಿ ಹಾಗೂ ಸಚಿವ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಡಿಸಿ ಪಿಎ ಅವರದ್ದು ಎನ್ನಲಾದ 70 ಲಕ್ಷಕ್ಕೂ ಅಧಿಕ ಲಂಚದ ವಾಟ್ಸಾಪ್ ಚಾಟ್ಗಳನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಎಲ್ಲ ದಾಖಲೆಗಳನ್ನು ತನಗೆ ಯಾರೋ ಒಬ್ಬರು ಕೊಟ್ಟು ಹೋಗಿದ್ದಾರೆ ಎಂದು ತಿಳಿಸಿದ ಅವರು, ಈ ರೀತಿ ಪ್ರತಿ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ. ಈ ಚಾಟ್ಗಳ ಬಗ್ಗೆ ಡಿಜಿ ಮತ್ತು ಐಜಿಪಿ ಡಾ.ಎಂ.ಎ.ಸಲೀಂ ಅವರು ತನಿಖೆ ಮಾಡಿಸ್ತಾರಾ? ಎಂದು ಪ್ರಶ್ನಿಸಿದ್ದಾರೆ.