ತುಮಕೂರು: ಖಾಸಗಿ ಶಿಕ್ಷಣಸಂಸ್ಥೆ ಹಾಗೂ ಕಾಪೋರ್ರೇಟ್ ಕಂಪನಿಗಳಿಗೆ ಸರ್ಕಾರಿ ಶಾಲೆಗಳನ್ನು ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ವಿರೋಧಿಸಿ ಅಲ್ ಇಂಡಿಯಾ ಡೆಮಾಕ್ರ. ನಗರದ ಟೌನ್ಹಾಲ್ ವೃತ್ತದಲ್ಲಿ ಶನಿವಾರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ಹುನ್ನಾರ, ಬಡಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಪ್ಲೇಕಾರ್ಡ್ಗಳನ್ನು ಹಿಡಿದ ಪ್ರತಿಭಟನಾನಿರತರು ಸಾರ್ವಜನಿಕ ಶಿಕ್ಷಣ ಉಳಿಯಲಿ, ಕನ್ನಡ ಶಾಲೆಗಳು ಮುಚ್ಚಲು ಬಿಡುವುದಿಲ್ಲ ಎಂಬ ಘೋಷಣೆಗಳನ್ನು ಕೂಗಿ ರಾಜ್ಯ ಸರ್ಕಾರದ ಹುನ್ನಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಜನತೆಯ ತೀವ್ರ ವಿರೋಧದ ನಡುವೆಯು ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ನೀತಿಯನ್ನು ಜಾರಿಗೆ ತರುತ್ತಿದೆ.