ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನರ್ಸಿಂಗ್ ಹೋಂನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ. ಪರಿಣಾಮ ಮಗು ಮೃತಪಟ್ಟಿದೆ. ಹೊಟ್ಟೆ ನೋವಿನಿಂದ ದಾಖಲಾಗಿದ್ದ ಬಾಲಕಿಯ ಗರ್ಭಧಾರಣೆ ಬಗ್ಗೆ ಕುಟುಂಬಕ್ಕೆ ತಿಳಿದಿರಲಿಲ್ಲ ಎಂದು ವರದಿಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ನರ್ಸಿಂಗ್ ಹೋಂ ಸಿಬ್ಬಂದಿ, ಕುಟುಂಬದವರ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಹೂಗ್ಲಿ, ನವೆಂಬರ್ 08: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹೊಟ್ಟೆ ನೋವಿನ ಕಾರಣಕ್ಕೆ ನರ್ಸಿಂಗ್ ಹೋಂಗೆ ದಾಖಲಾಗಿದ್ದ 16 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.