ನವದೆಹಲಿ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಬೆಳಕಿನ ಹಬ್ಬ ಪ್ರತಿಯೊಬ್. ಬೆಳಕಿನ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲೂ ಸಂತೋಷ, ನೆಮ್ಮದಿ, ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ. ಈ ಬಾರಿ ಕೂಡ ಎಂದಿನ ಸಂಪ್ರದಾಯದಂತೆ ದೇಶದ ಗಡಿಗಳನ್ನು ಕಾಯುತ್ತಿರುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸುವುದಾಗಿ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ದೀಪಾವಳಿ ಶುಭಾಶಯ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೇಶದಾದ್ಯಂತ ಇರುವ ನನ್ನ ಕುಟುಂಬದ ಸದಸ್ಯರಿಗೆ ಅನಂತ ದೀಪಾವಳಿ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.