ಹಾಸನಾಂಬೆ ಜಾತ್ರೆಯ 10ನೇ ದಿನದ ಭಾನುವಾರ ದೇವಾಲಯದಲ್ಲಿ ಭಕ್ತಸಾಗರವೇ ಹರಿದುಬಂದಿದೆ. ಧರ್ಮ ದರ್ಶನ ಮತ್ತು ಟಿಕೆಟ್ ಸಾಲುಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಅಂತಿಮ ಎರಡು ದಿನಗಳಲ್ಲಿ ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಸುಗಮ ದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ವಿಧಿಸಲಾಗಿದ್ದು, ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಸನ, ನವೆಂಬರ್ 08: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಜಾತ್ರೆಯ 10ನೇ ದಿನವಾದ ಭಾನುವಾರ ಅಪಾರ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಹರಿದು ಬಂದಿದ್ದಾರೆ. ವಾರಾಂತ್ಯ ಮತ್ತು ಜಾತ್ರೆಯ ಅಂತಿಮ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನಸಂದಣಿ ತೀವ್ರವಾಗಿ ಹೆಚ್ಚಳವಾಗಿದೆ.