ಹೊಸ ಬೆಳಕು, ಭರವಸೆ, ಸಂತೋಷ ಮತ್ತು ಸಮೃದ್ಧಿಯ ಸಂಕೇತವಾಗಿರುವ ಬೆಳಕಿನ ಹಬ್ಬ ದೀಪಾವಳಿಯನ್ನು ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ನವೆಂಬರ್ 8 ಭಾನುವಾರದಂದು ದೀಪಾವಳಿಯನ್ನು ಆಚರಿಸಲಾಗುತ್ತಿದ್ದು, ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಸ್ನೇಹಿತರು, ಕುಟುಂಬ ಮತ್ತು ಆಪ್ತರಿಗೆ ಸುಂದರವಾದ ದೀಪಾವಳಿ ಶುಭಾಶಯಗಳನ್ನು ಕಳುಹಿಸಲು ನೀವು ಬಯಸಿದರೆ, ಇಲ್ಲಿವೆ ನಿಮಗಾಗಿ ಮುತ್ತಿನಂತ ಶುಭ ಸಂದೇಶಗಳು. ಬೆಳಕಿನ ಹಬ್ಬ ದೀಪಾವಳಿ (Deepavali) ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು. ಈ ಹಬ್ಬವನ್ನು ದೀಪಗಳನ್ನು ಬೆಳಗಿ, ಪಟಾಕಿ ಹಚ್ಚಿ, ಸಿಹಿ ಹಂಚಿ ಸ್ನೇಹಿತರು ಮತ್ತು ಕುಟುಂಬದೊಂದಿದೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಅಲ್ಲದೆ ಈ ದಿನ ಲಕ್ಷ್ಮೀ ದೇವಿಯನ್ನು ಪೂಜಿಸಿ ಮನೆಯನ್ನು ದೀಪಗಳಿಂದ ಅಲಂಕರಿಸುತ್ತಾರೆ.