ಸಿಎಂ ಡಿಕೆ ಶಿವಕುಮಾರ್ ಸೋಮವಾರ ಬಿಡಿಎ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ, ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಈ ಕುರಿತ ಮಾಹಿತಿ ಇಲ್ಲಿದೆ. ಬೆಂಗಳೂರು, ನವೆಂಬರ್ 08: ರಾಜ್ಯದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಭೆ ನಡೆಸಲಿದ್ದಾರೆ. ಸೋಮವಾರ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಿಎ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಭೆಯ ಬಳಿಕ ಬೆಂಗಳೂರಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಯಿದೆ.