ಚಿತ್ರಮಂದಿರಗಳಲ್ಲಿ ‘ಪ್ರೇಮದ ಊರಲಿ’ ಸಿನಿಮಾ ಬಿಡುಗಡೆ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾವನ್ನು ಒಟಿಟಿಯಲ್ಲಿ ನೋಡಬೇಕು ಎಂದು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಸದ್ಯಕ್ಕೆ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿಲ್ಲ. ಯಾಕೆ ತಡವಾಗುತ್ತಿದೆ ಎಂಬುದಕ್ಕೆ ನಿರ್ದೇಶಕ ಮನೋಜ್ ಕುಮಾರ್ ಅವರು ಟಿವಿ9 ಸಂದರ್ಶನದಲ್ಲಿ ಉತ್ತರ ನೀಡಿದ್ದಾರೆ. ಅದೇ ರೀತಿ, ಚಿತ್ರಮಂದಿರದಲ್ಲೂ ಜನರು ಸಿನಿಮಾ ನೋಡುತ್ತಿದ್ದಾರೆ. ಚಿತ್ರಮಂದಿರದಲ್ಲಿ ನೋಡಿ ಎಂಜಾಯ್ ಮಾಡಬೇಕಾದ ಸಿನಿಮಾ ಇದು. ದೂರದ ಊರುಗಳಿಂದ ಕುಟುಂಬ ಸಮೇತರಾಗಿ ಬಂದ ಜನರು ಟಿಕೆಟ್ ಸಿಗದೇ 2 ದಿನ ಕಾದು ವಾಪಸ್ ಹೋದವರು ಇದ್ದಾರೆ. ಯಾಕೆಂದರೆ, ಎಲ್ಲರಿಗೂ ಆ್ಯಪ್ ಮೂಲಕ ಟಿಕೆಟ್ ಬುಕ್ ಮಾಡಿಕೊಳ್ಳೋಕೆ ಆಗಲ್ಲ.