ಮೇಕೆದಾಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಅನುಮತಿ ನಿರಾಕರಿಸಿದ ಪತ್ರಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದ್ದಾರೆ. ಮೇಕೆದಾಟು ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ಎಂದ ಅವರು, ಸುಪ್ರೀಂ ಕೋರ್ಟ್ ಈಗಾಗಲೇ ಅನುಮತಿ ನೀಡಿದ್ದು, ತಮಿಳುನಾಡಿನ ಸಹಕಾರ ಮಾತ್ರ ಅಗತ್ಯ ಎಂದು ತಿಳಿಸಿದ್ದಾರೆ. ಹಾಸನ, ನವೆಂಬರ್ 08: ಮೇಕೆದಾಟು ಯೋಜನೆಗೆ ಅನುಮತಿ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ‘ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ’ ಎಂದಿದ್ದಾರೆ. ಹಾಸನಾಂಬೆ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೇಂದ್ರದ ಒಪ್ಪಿಗೆಗಿಂತ ಸುಪ್ರೀಂಕೋರ್ಟ್ ಅನುಮತಿ ಕೊಟ್ಟಿದೆ.