ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾದ ದೃಶ್ಯಗಳನ್ನು ಅಪ್ಲೋಡ್ ಮಾಡಿರುವವರು ತಕ್ಷಣವೇ ಅವುಗಳನ್ನು ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ಪೈರಸಿ ಕ್ಲಿಪ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಯಾವುದೇ ಮುನ್ಸೂಚನೆ ನೀಡದೆ ಸಿವಿಲ್, ಕ್ರಿಮಿನಲ್ ಮತ್ತು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ‘ರಾಮಾಯಣ’ ಚಿತ್ರತಂಡ ಎಚ್ಚರಿಕೆ ನೀಡಿದೆ. ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಮಾಯಣ: ಪಾರ್ಟ್ 1’ ಸಿನಿಮಾವನ್ನು ಪೈರಸಿ ಮಾಡುವವರಿಗೆ ನಿರ್ಮಾಪಕರು ಲೀಗಲ್ ನೋಟಿಸ್ ನೀಡಿದ್ದಾರೆ. ಚಿತ್ರಮಂದಿರಗಳಲ್ಲಿ ಅನಧಿಕೃತವಾಗಿ ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.