ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಭರ್ಜರಿಯಾಗಿ ಸಾಗುತ್ತಿದೆ. ಕ್ರೈಸ್ಟ್ಚರ್ಚ್ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯವನ್ನು ಗೆದ್ದು, ಇನ್ನೆರಡು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ತಂಡವು ಈ ಟಿ20 ಸರಣಿಯಲ್ಲಿ ಮೂರನೇ ಪಂದ್ಯದ ಮೂಲಕ ಕಮ್ಬ್ಯಾಕ್ ಮಾಡಲು ತುದಿಗಾಲಿನಲ್ಲಿ ನಿಂತಿದೆ. ಹೀಗಾಗಿ ಮೂರನೇ ಟಿ20 ಪಂದ್ಯವು ಸಾಕಷ್ಟು ರೋಚಕತೆಯಿಂದ ಕೂಡಿರುವ ನಿರೀಕ್ಷೆಯಿದೆ.