ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಸ್ತ ಭಾರತೀಯರಿಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಆದರೆ, ಈ ಶುಭಾಶಯ ಕೋರುವಾಗ ಅವರು ಬಳಸಿದ ಪದಗಳು ಇದೀಗ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿವೆ. ಹಬ್ಬದ ಶುಭಾಶಯ ವಿನಿಮಯವೂ ಇದೀಗ ರಾಜಕೀಯವಾಗಿ ವಾಗ್ವಾದಕ್ಕೆ ಕಾರಣವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರು ಅವರು ದೀಪಾವಳಿಯನ್ನು "ಖುಷಿಯ ಈದ್" ಎಂದು ಬಣ್ಣಿಸಿದ್ದರು. ಇದನ್ನು ಖಂಡಿಸಿ ಬಿಜೆಪಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ನಾಯಕರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.