ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಗುಂಡಿಗಳಿಂದ ಜನರಿಗೆ ಆಗುತ್ತಿದ್ದ ತೊಂದರೆಗೆ ಪೊಲೀಸರು ಸ್ಪಂದಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಹಲವು ಬಾರಿ ಗಮನಕ್ಕೆ ತಂದರೂ ಗುಂಡಿ ಮುಚ್ಚದಿದ್ದಾಗ, ಸಂಚಾರಿ ಪೊಲೀಸರೇ ಖುದ್ದು ಸಿಮೆಂಟ್ ಬಳಸಿ ಗುಂಡಿಗಳನ್ನು ಮುಚ್ಚಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ಬೆಂಗಳೂರು, ನವೆಂಬರ್ 09: ನಗರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮುಂದುವರೆದಿದ್ದು, ಜಿಬಿಎ ಬದಲಿಗೆ ಪೊಲೀಸರೇ ಗುಂಡಿ ಮುಚ್ಚಿರುವ ಘಟನೆ ಜಿಬಿಎ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ಸೇರುವ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ವಾರ್ಡ್ ಒನ್ ಅಭಿಯಾನ ಮಾಡಿದರೂ ಗುಂಡಿಗಳಿಂದ ಮುಕ್ತಿ ಸಿಕ್ಕಿಲ್ಲ. ಹಲವು ಬಾರಿ ಗಮನಕ್ಕೆ ತಂದರೂ ಜಿಬಿಎ ಅಧಿಕಾರಿಗಳು ಗುಂಡಿ ಮುಚ್ಚಿಲ್ಲ.