ನಾಪೋಕ್ಲು: ಇಲ್ಲಿಗೆ ಸಮೀಪದ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಚೆಯ್ಯಂಡಾಣೆ ರಾಜ್ಯೋತ್ಸವ ಕ್ರೀಡಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕ್ರೀಡಾಕೂಟವು. ಕಾರ್ಯಕ್ರಮದ ಆರಂಭದಲ್ಲಿ ಕ್ರೀಡಾ ಸಮಿತಿಯ ಉಪಾಧ್ಯಕ್ಷ ಚೆಯ್ಯಂಡ ನಂದನಾಚಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ, ಅಧ್ಯಕ್ಷ ಚೇನಂಡ ಸಂಪತ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ಸೈನಿಕ ಚೆಯ್ಯಂಡ ಶಂಕರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ನರಿಯಂದಡ ತಂಡದ ವಿಶ್ವಪ್ರೀತ್, ಕೊಕೇರಿ ತಂಡದ ನಿವೃತ್ತ ಸೈನಿಕ ಚೇನಂಡ ಸಚಿನ್ ಹಾಗೂ ಚೇಲಾವರ ತಂಡದ ಹಾರ್ಥಿಕ್ ಕಾಳಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು.