ಸಿದ್ದಾಪುರ: ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣ ಗುರು ಅವರ ಆದರ್ಶ ಮತ್ತು ಚಿಂತನೆ ತಿಳಿದುಕೊಂಡು, ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ವಿರಾಜಪೇಟೆ ಶ. ಬೋಪಯ್ಯ ಕರೆ ನೀಡಿದರು..ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಕೊಡಗು ಯೂನಿಯನ್ (ಎಸ್ಎನ್ಡಿಪಿ) ವತಿಯಿಂದ ಸಿದ್ದಾಪುರದ ನಾರಾಯಣ ಗುರು ಸಭಾಂಗಣದಲ್ಲಿ ಆಯೋಜಿಸಿದ್ದ ೧೬೮ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು..ಭಾರತ ಅನೇಕ ಆಚಾರ-ವಿಚಾರ, ಸಂಸ್ಕೃತಿ ಮತ್ತು ಭಾಷೆ ಹೊಂದಿದೆ. ಭಾರತೀಯರೆಲ್ಲರೂ ಒಂದು ಎಂಬುದನ್ನು ಸಾರಿದ ಮಹಾನ್ ಮಾನವತಾವಾದಿ ನಾರಾಯಣ ಗುರು. ಒಂದೇ ಕುಲ, ಒಂದೇ ಜಾತಿ ಎಂಬುದನ್ನು ಸಾರಿದ್ದಾರೆ.