ಶಿವಮೊಗ್ಗ: ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ಯಾವುದೇ ಹಾನಿಯಾಗಿಲ್ಲ. ಈ ಕುರಿತು ವೈಜ್ಞಾನಿಕ ವರದಿ ತರಿಸಿಕೊಳ್ಳಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.ಆರಂಭದಲ್ಲಿ ಶೇ. ಎಥೆನಾಲ್ ಮಿಶ್ರಣದಿಂದ ಹಾನಿಯಾಗುತ್ತದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದ ಮೂಲಕ ದೇಶದ ವಿವಿಧ ರಾಜ್ಯಗಳಲ್ಲೂ ಪರೀಕ್ಷೆ ನಡೆಸಲಾಗಿದೆ. ವರದಿ ಪರಿಶೀಲಿಸಿದ್ದು, ವೈಜ್ಞಾನಿಕವಾಗಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೆ ರಾಜ್ಯ ಸರ್ಕಾರದವರು ಪರೀಕ್ಷೆ ನಡೆಸಿರುವುದಾಗಿ ಹೇಳುತ್ತಿದ್ದು, ಅದು ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.ಎಥೆನಾಲ್ ಮಿಶ್ರಣದಿಂದ ಹಾನಿಯಾಗಿರುವುದಕ್ಕೆ ಯಾರಾದರೂ ಸಾಕ್ಷ್ಯ ನೀಡಲಿ. ಯಾವುದೇ ಹಾನಿಯಾಗದಿದ್ದರೂ ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.