2008ಕ್ಕಿಂತ ಮುಂಚೆ ಮನೆ ಕಟ್ಟಿದವರಿಗೆ, ಸುಮಾರು 1 ಲಕ್ಷ ಮಾಲಿಕರಿಗೆ ಆಸ್ತಿ ದೊರಕಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಸರ್ಕಾರ ಅವಕಾಶ ನೀಡಿತು. 2021ರಲ್ಲಿಯೇ ದರ ನಿಗದಿ ಮಾಡಿತ್ತು. ಆದರೆ ಶುಲ್ಕ ಹೆಚ್ಚಾಯಿತೆಂದು ಕೇವಲ 600ಜನ ಮಾತ್ರ ಅರ್ಜಿ ಹಾಕಿದ್ದರು. ಆದರೆ ನಾವು ಶುಲ್ಕ ಕಡಿಮೆ ಮಾಡಿ ಇನ್ನೊಂದು ಅವಕಾಶ ನೀಡಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು, ನ.09: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ತಿ ದಾಖಲೆಗಳಿಲ್ಲದ ಭೂ ಮಾಲೀಕರಿಗೆ ಭೂ ಗ್ಯಾರಂಟಿ ಸೇರಿದಂತೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (CM DK Shivakumar) ತಿಳಿಸಿದರು.