Hassan DC Transfer Bribery Allegation Minister km Shivalinge Gowda Hits Back at Kumaraswamy. ಹಾಸನ: ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರು ವರ್ಗಾವಣೆ ತಪ್ಪಿಸಿಕೊಳ್ಳಲು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಶಿವಲಿಂಗೇಗೌಡ ಅವರಿಗೆ ಲಂಚ ನೀಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಶಿವಲಿಂಗೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಲತಾಕುಮಾರಿ ಅವರು ವರ್ಗಾವಣೆ ತಪ್ಪಿಸಿಕೊಳ್ಳಲು ನನಗೆ ಲಂಚ ನೀಡಿದ್ದಾರೆ ಎಂಬ ನಿಮ್ಮ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ. ಸಾರ್ವಜನಿಕ ಬದುಕಿನಲ್ಲಿರುವವರ ವಿರುದ್ಧ ಇಂತಹ ಗಂಭೀರ ಆರೋಪ ಮಾಡುವಾಗ ಅದನ್ನು ಸಾಬೀತುಪಡಿಸುವ ಜವಾಬ್ದಾರಿಯೂ ಇರಬೇಕು.