Bomb Threat Email to Belagavi And Hubballi-Dharwad City Corporations: ಇಂದು ಮಧ್ಯಾಹ್ನ 1 ಗಂಟೆಗೆ ಮಹಾನಗರ ಪಾಲಿಕೆ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. 3 Min Read ಬೆಳಗಾವಿ/ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಬೆಳಗಾವಿ ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಗಳಿಗೆ ಅಪರಿಚಿತ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪಾಲಿಕೆ ಕಚೇರಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ತಪಾಸಣೆಯಲ್ಲಿ ತೊಡಗಿದ್ದಾರೆ.