* ಉಡುಪಿ ಎಸ್ಪಿ ಹರಿರಾಮ ಶಂಕರ ಮಾಹಿತಿಉಡುಪಿ: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ನಡೆದ ಹಲ್ಲೆಯಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ. ಆರಂಭದಲ್ಲಿ ಯುವತಿಯೂ ಸಹ ಆತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಆದರೆ, ಆತನ ವಿರುದ್ಧ ಯುವತಿಯು ಹಿರಿಯಡ್ಕ ಠಾಣೆಯಲ್ಲಿ ಅತ್ಯಾಚಾರ ಮಾಡಿದ್ದಾಗಿ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರದೀಪನನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಬಳಿಕ ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದನು.ದೂರು ದಾಖಲಿಸಿಕೊಳ್ಳದ ಪೊಲೀಸರುಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪ್ರದೀಪ ಇತ್ತೀಚೆಗೆ ಯುವತಿಯನ್ನು ಭೇಟಿಯಾಗಲು ಪ್ರಯತ್ನಿಸಿದ್ದ. ಈ ವೇಳೆ ಯುವತಿಯ ಸಹೋದರನ ಕಡೆಯವರು ಹಲ್ಲೆ ಮಾಡಿದ್ದರು ಎನ್ನಲಾಗಿದ್ದು, ಗಾಯಗೊಂಡಿದ್ದ ಆತ ಹಿರಿಯಡ್ಕ ಠಾಣೆಗೆ ದೂರು ನೀಡಲು ಬಂದಿದ್ದ.