ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ದೇಶದ ಹಲವು ಸಂಘಟನೆಗಳಲ್ಲಿ 'ದಿಮಾಗಿ ನಕ್ಸಲರು' (. ದೇಶದ ಹಲವು ಸಂಘಟನೆಗಳಲ್ಲಿ 'ದಿಮಾಗಿ ನಕ್ಸಲರು' (Dimagi Naxals) ನುಸುಳಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ರಾಹುಲ್ ಗಾಂಧಿ, ದೇಶವಿರೋಧಿ ಯಾರು ಮತ್ತು ವಿದೇಶಿ ಶಕ್ತಿಗಳ ಕಂಟ್ರೋಲ್ನಲ್ಲಿ ಇರುವವರು ಯಾರು ಎಂಬುದರ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಮತ್ತೊಮ್ಮೆ ಸವಾಲು ಹಾಕಿದ್ದಾರೆ.ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಕಿಡಿಕಾರಿರುವ ರಾಹುಲ್ ಗಾಂಧಿ, "ಆತ್ಮೀಯ ಸಿಎಆರ್ಪಿಎಫ್ನವರೇ, ನಿಮ್ಮ ಮುಖಗಳೇ ಎಲ್ಲವನ್ನೂ ಹೇಳುತ್ತಿದ್ದವು. ಪ್ರಧಾನಿಯವರ ಸುಳ್ಳುಗಳನ್ನು ನೀವು ನಂಬಲಿಲ್ಲ ಎಂಬುದು ಸ್ಪಷ್ಟವಾಗಿತ್ತು.