ಭಾರತ ಕಿರಿಯರ ತಂಡದ ಆರ್ಯವೀರ್ ಸೆಹ್ವಾಗ್ ಅವರ ಆರ್ಭಟ ಮುಂದುವರೆದಿದೆ. ತಂದೆ ವೀರೇಂದ್ರ ಸೆಹ್ವಾಗ್ ಶೈಲಿಯಲ್ಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಆರ್ಯವೀರ್, ಯುಎಇ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಸ್ಫೋಟಕ ಪ್ರದರ್ಶನದ ಮೂಲಕ ಜೂನಿಯರ್ ಸೆಹ್ವಾಗ್, ತಮ್ಮ ಅದ್ಭುತ ಬ್ಯಾಟಿಂಗ್ ಸಾಮರ್ಥ್ಯದಿಂದ ಕ್ರಿಕೆಟ್ ವಲಯದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂಡರ್-19 ಏಷ್ಯಾಕಪ್ ಟೂರ್ನಿಯ 11ನೇ ಪಂದ್ಯದಲ್ಲಿ ಆರ್ಯವೀರ್ ಸೆಹ್ವಾಗ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಒಮಾನ್ ಅಲ್ ಅಮೆರತ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.