ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್ ನಲ್ಲಿ ಈವರೆಗೆ 126 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 65 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 8 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು. ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಇದಾಗ್ಯೂ, ವಿಳಂಬವಾಗಿ ನಡೆದ ಟಾಸ್ ಪ್ರಕ್ರಿಯೆಯಲ್ಲಿ ಟೀಮ್ ಇಂಡಿಯಾ ಟಾಸ್ ಜಯಿಸಿ ಬೌಲಿಂಗ್ ಆಯ್ದುಕೊಂಡಿತು. ಆದರೆ, ಟಾಸ್ ಬೆನ್ನಲ್ಲೇ ಶುರುವಾದ ಧಾರಾಕಾರ ಮಳೆಯಿಂದಾಗಿ ಪಂದ್ಯ ಆರಂಭಿಸಲು ಸಾಧ್ಯವಾಗಲೇ ಇಲ್ಲ.