ನಟಿ ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲೇ ಸೆಟ್ಲ್ ಆಗಿದ್ದಾರೆ. ವಿದೇಶದಲ್ಲಿ ನೆಲೆಸಿದ್ದರೂ ಕೂಡ ಅವರು ಭಾರತದ ಹಬ್ಬಗಳನ್ನು ತಪ್ಪದೇ ಆಚರಿಸುತ್ತಾರೆ. ಪ್ರತಿ ಬಾರಿ ಹಬ್ಬದ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ವರ್ಷದ ದೀಪಾವಳಿ ಹಬ್ಬವನ್ನು ಕೂಡ ಅವರು ಸಡಗರದಿಂದ ಆಚರಿಸಿದ್ದಾರೆ. ಆದರೆ ಅವರನ್ನು ಟ್ರೋಲ್ ಮಾಡಲಾಗಿದೆ. ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಲಾಸ್ ಏಂಜಲೀಸ್ ಮನೆಯಲ್ಲಿ ಕುಟುಂಬದೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಮೇರಿ ಜೊತೆ ಆಚರಿಸಿದ ಹಬ್ಬದ ಫೋಟೋಗಳನ್ನು ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.