ಮುಂಬೈ: ಮಹಾರಾಷ್ಟ್ರದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಮುಂದಾಗಿರುವ ಸರ್ಕಾರದ ನಡೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳ. ಮಂಗಳವಾರ (ನ.10) ನಡೆದ ಸುದ್ದಿಗೋಷ್ಠಿಯಲ್ಲಿ ಗುಡುಗಿದ ಓವೈಸಿ, "ಸರ್ಕಾರ ತರಲು ಹೊರಟಿರುವುದು ಏಕರೂಪ ನಾಗರಿಕ ಸಂಹಿತೆಯಲ್ಲ, ಅದು ಅಪ್ಪಟ 'ಹಿಂದೂ ನಾಗರಿಕ ಸಂಹಿತೆ'. ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ," ಎಂದು ಸಿಎಂ ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಬಾಬರಿ ಮಸೀದಿ ವಿಚಾರ ಮುಂದಿಟ್ಟುಕೊಂಡು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧವು ಕಿಡಿಕಾರಿದ್ದಾರೆ. .ಇಸ್ಲಾಂನಲ್ಲಿ ಮದುವೆ ಅಂದ್ರೆ ಒಪ್ಪಂದ, ಜೀತವಲ್ಲ!