ವಾಟಾಳ್ ನಾಗರಾಜ್ ಅವರು ಟಿಪ್ಪು ಸುಲ್ತಾನ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಸತ್ ಭವನದಲ್ಲಿ ಟಿಪ್ಪು ಅವರ ಚಿತ್ರಪಟವನ್ನು ಇಡಬೇಕೆಂದು ಒತ್ತಾಯಿಸಿದ್ದಾರೆ. ಯಾವುದೇ ಭೇದಭಾವವಿಲ್ಲದೆ ಈ ಮಹಾನ್ ಹೋರಾಟಗಾರನಿಗೆ ಗೌರವ ಸಲ್ಲಿಸಬೇಕು ಎಂದರು. ತನ್ನ ಮಕ್ಕಳನ್ನು ದೇಶಕ್ಕಾಗಿ ಒತ್ತೆಯಿಟ್ಟ ಟಿಪ್ಪು ಅವರ ಆದರ್ಶ ಮತ್ತು ಪ್ರಾಮಾಣಿಕತೆಯನ್ನು ಶ್ಲಾಘಿಸಿದರು. ದೇವನಹಳ್ಳಿಯಲ್ಲಿ ಸ್ಮಾರಕ ನಿರ್ಮಿಸಲು ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮನವಿ ಮಾಡಿದರು. ದೇವನಹಳ್ಳಿ, ನವೆಂಬರ್ 10: ಇಂದು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಟಿಪ್ಪು ಪುತ್ಥಳಿಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.