ಬಿಹಾರ ಸರ್ಕಾರ ಸಾರ್ವಜನಿಕರ ದೂರುಗಳನ್ನು ನಿರ್ಲಕ್ಷ್ಯ ಮಾಡಿದ 15 ಸರ್ಕಾರಿ ನೌಕರರನ್ನು ಅಮಾನತುಗೊಳಿಸಿದೆ. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ‘ಸಹಯೋಗ’ ಸಾರ್ವಜನಿಕ ಕುಂದುಕೊರತೆ ಕಾರ್ಯಕ್ರಮದಲ್ಲಿ ಈ ಲೋಪ ಬೆಳಕಿಗೆ ಬಂದಿದ್ದು, ದೂರುಗಳನ್ನು ಸಮಯಕ್ಕೆ ಸರಿಯಾಗಿ ಪರಿಹರಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಆದ್ಯತೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಪಾಟ್ನಾ, ನವೆಂಬರ್ 10: ಸಾರ್ವಜನಿಕರ ದೂರುಗಳನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಬಿಹಾರ ಸರ್ಕಾರ 15 ಸರ್ಕಾರಿ ನೌಕರರನ್ನು ಅಮಾನತುಗೊಳಿಸಿದೆ. ವೃತ್ತ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಎಂಜಿನಿಯರ್ಗಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಈ ಕ್ರಮಕ್ಕೆ ಒಳಗಾಗಿದ್ದಾರೆ.