ಶಿಕ್ಷಣವು ಮೂಲಭೂತ ಹಕ್ಕಾಗಿದ್ದು, ಇದು ಒಬ್ಬ ವ್ಯಕ್ತಿಯ ಜೀವನವನ್ನು, ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ರೂಪಿಸುವ ಸಾಮರ್ಥ್ಯವನ್ನು ಹೊಂದಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವವನ್ನು ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ನವೆಂಬರ್ 11 ರಂದು ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಇದೇ ದಿನದಂದು ಏಕೆ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ ಎಂಬುದನ್ನು ತಿಳಿಯೋಣ ಬನ್ನಿ.