ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮದರ್ ಡೈರಿ ಕೂಡ ಹಾಲಿನ ಬೆಲೆಯನ್ನು ಲೀಟರ್ಗೆ ₹2 ರಿಂದ ₹4 ರವರೆಗೆ ಹೆಚ್ಚಿಸಿದ್ದು, ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ. ಇದರಿಂದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ರೈತರಿಂದ ಹಾಲು ಖರೀದಿ ದರ ಹೆಚ್ಚಳದ ಹಿನ್ನೆಲೆ ಬೆಲೆ ಏರಿಕೆ ಮಾಡಲಾಗಿದ್ದು, ಹಾಲು ಉತ್ಪಾದನಾ ವೆಚ್ಚ ಹೆಚ್ಚಳವೂ ದರ ಪರಿಷ್ಕರಣೆಗೆ ಪ್ರಮುಖ ಕಾರಣ ಎನ್ನಲಾಗಿದೆ.