ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಹೈಜಾಕ್ ಬೆದರಿಕೆ ಸಂದೇಶ ಪತ್ತೆಯಾಗಿ ಭದ್ರತಾ ಆತಂಕ ಸೃಷ್ಟಿಸಿತು. ಮುಂಬೈಗೆ ಹೊರಟಿದ್ದ ವಿಮಾನವನ್ನು ತಕ್ಷಣ ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಿ ತಪಾಸಣೆ ನಡೆಸಲಾಯಿತು. ಪೈಲಟ್ನ ಎಚ್ಚರಿಕೆಯ ನಂತರ ಭದ್ರತಾ ಸಿಬ್ಬಂದಿ ಕಾರ್ಯಾಚರಣೆಗಿಳಿದರು. ಇಂತಹ ಘಟನೆಗಳು ಈ ಹಿಂದೆ ಕೂಡ ವಿಮಾನ ನಿಲ್ದಾಣದಲ್ಲಿ ನಡೆದಿವೆ. ಪ್ರಯಾಣಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಯಿತು. ಕೋಲ್ಕತ್ತಾ, ನವೆಂಬರ್ 11: ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ವಿಮಾನ ಅಪಹರಣದ ಬೆದರಿಕೆ ಸಂದೇಶ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.