ಅಂಡರ್-19 ಏಷ್ಯಾ ಕಪ್ 2026 ರ ಸೆಮಿಫೈನಲ್ ವೇಳಾಪಟ್ಟಿ ಅಂತಿಮಗೊಂಡಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಡಬಲ್ ಧಮಾಕಾ ಸಿಗುವ ಸುಳಿವು ಸಿಕ್ಕಿದೆ. ನಾಳೆ (ನವೆಂಬರ್ 12) ನಡೆಯಲಿರುವ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ತಂಡ ಅಫ್ಘಾನಿಸ್ತಾನವನ್ನು ಎದುರಿಸಿದರೆ, ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ಸವಾಲನ್ನು ಎದುರಿಸಲಿದೆ. ACC ಪುರುಷರ U19 ಏಷ್ಯಾ ಕಪ್ 2026 ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ನಾಲ್ಕು ಬಲಿಷ್ಠ ತಂಡಗಳು ಸೆಮಿಫೈನಲ್ಗೆ ಲಗ್ಗೆ ಇಟ್ಟಿವೆ. ಅದರಂತೆ ಭಾರತ, ಪಾಕಿಸ್ತಾನ್, ಅಫ್ಘಾನಿಸ್ತಾನ್ ಮತ್ತು ಬಾಂಗ್ಲಾದೇಶ್ ತಂಡಗಳು ಸೆಮಿಫೈನಲ್ ಪಂದ್ಯಗಳನ್ನಾಡಲಿದೆ.