ನವೆಂಬರ್ 15ರಂದು ನಡೆಯಲಿರುವ 319 ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಸಿಸಿಟಿವಿ, ಜಾಮರ್ ಹಾಗೂ ಒಎಂಆರ್ ಶೀಟ್ನಲ್ಲಿ 5ನೇ ವೃತ್ತ ಸೇರಿದಂತೆ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ಹಿಂದಿನ ಲೋಪದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಕೆಪಿಎಸ್ಸಿ, ಈ ಬಾರಿ ಸಂಪೂರ್ಣ ಪಾರದರ್ಶಕವಾಗಿ ಪರೀಕ್ಷೆ ನಡೆಸುವ ಭರವಸೆ ನೀಡಿದೆ. ಬೆಂಗಳೂರು, ನವೆಂಬರ್ 11: ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ಅಕ್ರಮ, ಗೊಂದಲಗಳ ನಡುವೆಯೇ ಮತ್ತೊಂದು ಮಹತ್ವದ ಪರೀಕ್ಷೆಗೆ ಕೌಂಟ್ಡೌನ್ ಶುರುವಾಗಿದೆ. 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನವೆಂಬರ್ 15ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.