ರಾಯಚೂರು ಕವಿತಾಳ ಮದರಸಾದಲ್ಲಿ ಶಿಕ್ಷಕ ಅಬ್ಬಾಸ್ 10 ವರ್ಷದ ವಿದ್ಯಾರ್ಥಿಗೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಬಾಲಕನ ಕಣ್ಣು ಊದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಶಿಕ್ಷಕ ಅಬ್ಬಾಸ್ ಸೇರಿ 6 ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಬ್ಬಾಸ್ ಪರಾರಿಯಾಗಿದ್ದಾನೆ. ಈ ಹಿಂದೆಯೂ ಇಂತಹ ಘಟನೆ ನಡೆದಿದ್ದು, ಎಸ್ಪಿ ಅರುಣಾಂಗ್ಷು ಗಿರಿ ತನಿಖೆಗೆ ಆದೇಶಿಸಿದ್ದಾರೆ. ರಾಯಚೂರು, ನ.11: ಮಕ್ಕಳು ಹಾಗೂ ವಿದ್ಯಾರ್ಥಿಗಳು ಸರಿಯಾಗಿ ಓದದಿದ್ದರೆ ತಿದ್ದಿ ಬುದ್ಧಿ ಹೇಳಬೇಕಾದ ಶಿಕ್ಷಕನೊಬ್ಬ, ರಕ್ಕಸನಂತೆ ವರ್ತಿಸಿ 10 ವರ್ಷದ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ನಡೆದಿದೆ.