ಬೆಳಗಿನ ವಾಯುವಿಹಾರದ ವೇಳೆ ಕುಸಿದುಬಿದ್ದ ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ನವದೆಹಲಿಯ ಏಮ್ಸ್ (AIIMS) ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಕೇಂದ್ರಕ್ಕೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. sದ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಈವರೆಗೂ ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ನವದೆಹಲಿ, ನವೆಂಬರ್ 11: ವಾಯುವಿಹಾರಕ್ಕೆ ತೆರಳಿದ್ದ ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕುಸಿದು ಬಿದ್ದಿರುವ ಘಟನೆ ಇಂದು (ನವೆಂಬರ್ 11) ನಡೆದಿದೆ. ಕೂಡಲೇ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.